Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:2 - ಕನ್ನಡ ಸಮಕಾಲಿಕ ಅನುವಾದ

2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಕಾ ತುಮಿ ಎಕ್ ಸಾಂಗಾ: ತುಮಿ ದೆವಾಚೊ ಆತ್ಮೊ ಖಾಯ್ದೊ ಕಾಯ್ ಸಾಂಗ್ತಾ ತೆ ಕರುನ್ ಜೊಡುನ್ ಘೆಟ್ಲ್ಯಾಶಿ, ಕಾಯ್ ಬರಿ ಖಬರ್ ಆಯ್ಕುನ್ ಅನಿ ತೆಚ್ಯಾ ವರ್‍ತಿ ವಿಶ್ವಾಸ್ ಕರುನ್ ಜೊಡುನ್ ಘೆಟ್ಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:2
19 ತಿಳಿವುಗಳ ಹೋಲಿಕೆ  

ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.


ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.


ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?


ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು