ಗಲಾತ್ಯದವರಿಗೆ 3:21 - ಕನ್ನಡ ಸಮಕಾಲಿಕ ಅನುವಾದ21 ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಹೆಚೊ ಅರ್ಥ್ ಖಾಯ್ದೊ ದೆವಾಚ್ಯಾ ಗೊಸ್ಟಿಯಾಕ್ನಿ ವಿರೊದ್ ಹೊವ್ನ್ ಹಾಯ್ ಮನುನ್ ಹೊಲೆ ಕಾಯ್? ಕನ್ನಾಚ್ ನಾ! ಕಶ್ಯಾಕ್ ಮಟ್ಲ್ಯಾರ್ ಜೆ ಮಾನ್ಸಾಕ್ನಾ ಘೆಟಲ್ಲೊ ಖಾಯ್ದೊ ಜಿವ್ ಹಾನ್ತಾ ಮಟ್ಲ್ಯಾರ್, ತೆಕಾ ಖಾಲ್ತಿ ಹೊವ್ನ್ ಚಲುನ್ ದೆವಾಚ್ಯಾ ವಾಂಗ್ಡಾ ಜಾವ್ನ್ ನಿತಿವಂತ್ ಮನುನ್ ಘೆವ್ಕ್ ಹೊಯ್ ಹೊತ್ತೆ. ಅಧ್ಯಾಯವನ್ನು ನೋಡಿ |