Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಪವಿತ್ರ್ ಪುಸ್ತಕ್ ಮನ್ತಾ ಸಗ್ಳೊ ಜಗುಚ್ ಪಾಪಾಚ್ಯಾ ಅದಿಕಾರಾಕ್ ಖಾಯ್ಲ್ ಹಾಯ್ ಅನಿ ತೆಚ್ಯಾಸಾಟ್ನಿ ಜೆಜು ಕ್ರಿಸ್ತಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗೊಸ್ಟ್ ದಿಲ್ಲೆ ದೆನೆ ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:22
31 ತಿಳಿವುಗಳ ಹೋಲಿಕೆ  

ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.


ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು