ಗಲಾತ್ಯದವರಿಗೆ 3:23 - ಕನ್ನಡ ಸಮಕಾಲಿಕ ಅನುವಾದ23 ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕ್ರಿಸ್ತನಂಬಿಕೆಯ ಕಾಲ ಬರುವದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವದಕ್ಕಾಗಿ ಧರ್ಮಶಾಸ್ತ್ರದ ಕೈಕೆಳಗೆ ಕಾವಲಲ್ಲಿ ಮುಚ್ಚಲ್ಪಟ್ಟಿದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ವಿಶ್ವಾಸಾಚೊ ಎಳ್ ಎವ್ಡ್ಯಾ ಅದ್ದಿ ಖಾಯ್ದ್ಯಾನ್ ಅಮ್ಕಾ ಯೆತಲೊ ವಿಶ್ವಾಸ್ ದಿಸಿ ಪಾತರ್ ಬಂದಿ ಕರುನ್ ಥವಲ್ಲ್ಯಾನ್ ನ್ಹಯ್. ಅಧ್ಯಾಯವನ್ನು ನೋಡಿ |