Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:24 - ಕನ್ನಡ ಸಮಕಾಲಿಕ ಅನುವಾದ

24 ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲಾಗಿ ಧರ್ಮಶಾಸ್ತ್ರವು ನಮ್ಮನ್ನು ಕಾಯುವ ಆಳಿನಂತಾಗಿದೆ; ನಾವು ನಂಬಿಕೆಯಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದುವದಕ್ಕಾಗಿ ಕ್ರಿಸ್ತನಲ್ಲಿಗೆ ಸೇರುವ ತನಕ ಅದು ನಮ್ಮನ್ನು ಕಾಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಹೊವ್ನ್ ಖಾಯ್ದೊ ಕ್ರಿಸ್ತ್ ಯೆಯ್ ಪಾತರ್ ಅಮ್ಕಾ ಚಾಲ್ವುಲಾಗಲ್ಲೊ, ಅಶೆ ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ನಿತಿವಂತ್ ಮನುನ್ ನಿರ್ನಯ್ ಹೊವ್ಕ್ ಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:24
16 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.


ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು