Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:28 - ಕನ್ನಡ ಸಮಕಾಲಿಕ ಅನುವಾದ

28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ರ್‍ಹಾತಾನಾ, ಜುದೆವ್ ಅನಿ ಗ್ರಿಕ್ ಅಸಲ್ಲ್ಯಾಂಚ್ಯಾ ಮದ್ದಿ ಗುಲಾಮ್ ಅನಿ ಸ್ವತಂತ್ರ್ ಅಸಲ್ಲ್ಯಾ ಮದ್ದಿ ಘೊವ್ಮಾನ್ಸಾ ಅನಿ ಬಾಯ್ಕೊಮಾನ್ಸಾಂಚ್ಯಾ ಮದ್ದಿ ಕಸ್ಲೊಬಿ ಬೆದ್‍ ನಾ ತುಮಿ ಸಗ್ಳೆ ಜಾನಾ ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಎಕ್ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:28
31 ತಿಳಿವುಗಳ ಹೋಲಿಕೆ  

ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.


ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು