ಗಲಾತ್ಯದವರಿಗೆ 4:14 - ಕನ್ನಡ ಸಮಕಾಲಿಕ ಅನುವಾದ14 ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಮಾಜೆ ಶಿಕ್‍ಪಾನ್ ಎಕ್ ಮೊಟಿ ಪರಿಕ್ಷಾ ಸಾರ್ಕೆ ತುಮ್ಕಾ ಹೊತ್ತೆ , ಜಾಲ್ಯಾರ್ಬಿ ತುಮಿ ಮಾಕಾ ಧುರ್ ಕರುಕ್‌ನ್ಯಾಶಿ, ನಾಹೊಲ್ಯಾರ್ ಕಿಳ್ ಕರುನ್ ಬಗುಕ್‌ನ್ಯಾಶಿ. ತೆಚ್ಯಾ ಬದ್ಲಾಕ್ ತುಮಿ ಮಾಕಾ ಸರ್ಗಾ ವೈಲ್ಯಾ ದೆವಾಚ್ಯಾ ದುತಾ ಸಾರ್ಕೆ ಸ್ವಾಗತ್ ಕರ್ಲ್ಯಾಸಿ ಅನಿ ಕ್ರಿಸ್ತಾ ಜೆಜುಕ್ ಸ್ವಿಕಾರ್ ಕರ್ಲ್ಯಾ ಸಾರ್ಕೆ ತುಮಿ ಸ್ವಿಕಾರ್ ಕರ್ಲ್ಯಾಸಿ . ಅಧ್ಯಾಯವನ್ನು ನೋಡಿ |