Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:15 - ಕನ್ನಡ ಸಮಕಾಲಿಕ ಅನುವಾದ

15 ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ; ಆ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತುಮಿ ಲೈ ಕುಶಿನ್ ಹೊತ್ತ್ಯಾಶಿ. ತಿ ಕುಶಿ ಅತ್ತಾ ಖೈ ಹಾಯ್? ಮಿಯಾಚ್ ಸಾಕ್ಷಿ ದಿತಾ. ಸಾಧ್ಯ್ ಹೊಲ್ಯಾರ್ ತುಮ್ಚೆ ಡೊಳೆ ಸೈತ್ ಮೆಟ್ಟುನ್ ಕಾಡುನ್ ಮಾಕಾ ದಿವ್ಕ್ ತುಮಿ ತಯಾರ್ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:15
17 ತಿಳಿವುಗಳ ಹೋಲಿಕೆ  

ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ನಿಮಗಾಗಿಯೂ ಲವೊದಿಕೀಯ ಹಾಗೂ ಹಿರಿಯಾಪೊಲಿಯ ಜನರಿಗಾಗಿಯೂ ಅವನು ಬಹಳ ಪ್ರಯಾಸಪಡುತ್ತಿದ್ದಾನೆಂದು ಎಪಫ್ರನ ವಿಷಯವಾಗಿ ನಾನು ಸಾಕ್ಷಿ ಹೇಳುತ್ತೇನೆ.


ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.


ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು