ಗಲಾತ್ಯದವರಿಗೆ 4:22 - ಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದರಲ್ಲಿ ಬರೆದಿರುವದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು; ಒಬ್ಬನು ತೊತ್ತಿನಿಂದ ಹುಟ್ಟಿದವನು, ಒಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ಅಬ್ರಾಹಾಮಾಕ್ ದೊನ್ ಲೆಕಾ, ಗುಲಾಮ್ ಬಾಯ್ಕೊಮನ್ಸಿಚೊ ಲೆಕ್ ಅನಿ ಎಕ್ ಸ್ವತಂತ್ರ್ ಬಾಯ್ಕೊಮನ್ಸಿಚೊ ಲೆಕ್. ಅಧ್ಯಾಯವನ್ನು ನೋಡಿ |