ಗಲಾತ್ಯದವರಿಗೆ 4:24 - ಕನ್ನಡ ಸಮಕಾಲಿಕ ಅನುವಾದ24 ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಹಿ ಸಂಗ್ತಿಯಾ ಪ್ರತಿ ರುಪಾಚ್ಯಾ ರಿತಿನ್ ಕಳ್ವುನ್ ಘೆವ್ಕ್ ಹೊತಾ: ದೊನ್ ಬಾಯ್ಕೊಮಾನ್ಸಾ ದೊನ್ ಕರಾರಾ ದಾಕ್ವುನ್ ದಿತ್ಯಾತ್, ಜೆ ಕೊನಾಚಿ ಪೊರಾ ಗುಲಾಮಪಾನಾತ್ ಜಲಮ್ಲಾತ್ ತಿ ಹಾಗಾರಾ ಅನಿ ತಿ ಸಿನಾಯ್ ಮಡ್ಡಿ ವರ್‍ತಿ ಕರಲ್ಲೊ ಕರಾರ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿ |