Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-5 ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-5 ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಆಕ್ರಿಕ್ ಸಮಾ ಎಳ್ ಯೆಲೊ, ದೆವಾನ್ ಅಪ್ನಾಚ್ಯಾ ಲೆಕಾಕ್ ಧಾಡುನ್ ದಿಲ್ಯಾನ್, ತೊ ಎಕ್ ಬಾಯ್ಕೊಮನ್ಸಿಚೊ ಲೆಕ್ ಹೊವ್ನ್ ಜಲಮ್ಲೊ ಅನಿ ಜುದೆವಾಂಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ತೊ ಚಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:4
44 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


“ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


“ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.


ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.


ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.


ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು