Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:8 - ಕನ್ನಡ ಸಮಕಾಲಿಕ ಅನುವಾದ

8 ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಫಾಟಿ ತುಮ್ಕಾ ದೆವಾಚಿ ವಳಕ್ ನತ್ತಿ, ಅನಿ ತುಮಿ ಸ್ವಭಾವಾನ್ ದೆವ್ ನ್ಹಯ್ ಹೊತ್ತ್ಯಾಕ್ನಿ ಗುಲಾಮಾ ಹೊವ್ನ್ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:8
31 ತಿಳಿವುಗಳ ಹೋಲಿಕೆ  

ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.


ಅವರು ಬಾರ್ನಬನನ್ನು “ಜೆಯುಸ್” ದೇವರು ಎಂದೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು “ಹೆರ್ಮೆ” ದೇವರು ಎಂದೂ ಕರೆದರು.


ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.


ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!”


ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು