Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:1 - ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತಾನ್ ಅಮ್ಕಾ ಸ್ವತಂತ್ರ್ ಕರಲ್ಲೆ ಹಾಯ್, ತಸೆ ರ್‍ಹಾತಾನಾ ಸ್ವತಂತ್ರ್ ಹೊವ್ನ್ ರ್‍ಹಾವಾ ಅನಿ ಪರ್ತುನ್ ತುಮ್ಕಾಚ್ ತುಮಿ ಗುಲಾಮ್ಗಿರಿಕ್ ದಿವ್ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:1
42 ತಿಳಿವುಗಳ ಹೋಲಿಕೆ  

ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.


ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಹೀಗಿರುವಲ್ಲಿ ಪ್ರಿಯರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳೇ ಆಗಿದ್ದೇವೆ.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.


ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ?


ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.


ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.


ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.


ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ.


ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.


ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.


ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ.


ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು