Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:19 - ಕನ್ನಡ ಸಮಕಾಲಿಕ ಅನುವಾದ

19 ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ಶರೀರಭಾವವು ಮಾಡುವ ಕೆಟ್ಟ ಸಂಗತಿಗಳು ಸ್ಪಷ್ಟವಾಗಿವೆ. ಜಾರತ್ವ, ಅಶುದ್ಧತ್ವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನ್ಸಾಚೊ ಸ್ವಬಾವ್ ಕರ್‍ತಲಿ ಕಾಮಾ ದಿಸುನ್ಗೆತ್ ಹಾತ್, ಅನೈತಿಕ್ ಸಮಂದ್, ಪೊಜ್ಡೆಪಾನ್ ಅನಿ ಮರ್‍ಯಾದ್ಗೆಡಿಪಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:19
30 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.


ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು