Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:2 - ಕನ್ನಡ ಸಮಕಾಲಿಕ ಅನುವಾದ

2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡಿರಿ, ಪೌಲನೆಂಬ ನಾನು ನಿಮಗೆ ಒಂದನ್ನು ಹೇಳುತ್ತೇನೆ - ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲು ಮನ್ತಲ್ಯಾ ಮಿಯಾ ತುಮಿ ಸುನ್ನತ್ ಕರುನ್ ಘೆವ್ಕ್ ತುಮ್ಕಾಚ್ ಸೊಡುನ್ ದಿಲ್ಯಾರ್, ಕ್ರಿಸ್ತಾಕ್ನಾ ಕಾಯ್ಬಿ ಫಾಯ್ದೊ ನಾ ಮನುನ್ ಹೊಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:2
16 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.


ಆದ್ದರಿಂದ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಪೌಲನಾದ ನಾನಂತೂ ಮತ್ತೆ ಮತ್ತೆ ಬರಲು ಬಯಸಿದೆನು. ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಪೌಲನೆಂಬ ನಾನು, ಸ್ವಂತ ಕೈಯಿಂದ ಈ ವಂದನೆಯನ್ನು ಬರೆದಿದ್ದೇನೆ.


ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು