Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:26 - ಕನ್ನಡ ಸಮಕಾಲಿಕ ಅನುವಾದ

26 ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಗರುಕಿ ನಾಹೊಲ್ಯಾರ್ ಕಿರಿಕಿರಿ ಕರುಚೆ ನ್ಹಯ್, ನಾಹೊಲ್ಯಾರ್ ಕುಸ್ಡೆಪಾನ್ ಕರುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:26
8 ತಿಳಿವುಗಳ ಹೋಲಿಕೆ  

ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು