Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಬರೆ ಕರುನ್ ಚಲುಲ್ಯಾಸಿ! ತುಮಿ ಖರ್‍ಯಾಕ್ ಖಾಯ್ಲ್ ಹೊವ್ನ್ ಚಲಿನಸಿ ಸಾರ್ಕೆ ಕರಲ್ಲೊ ಕೊನ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:7
17 ತಿಳಿವುಗಳ ಹೋಲಿಕೆ  

ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.


ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು