Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:8 - ಕನ್ನಡ ಸಮಕಾಲಿಕ ಅನುವಾದ

8 ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಅಪ್ನಾಚ್ಯಾ ಮಾನ್ಸಾಚ್ಯಾ ಆಶೆನ್ ಪೆರ್‍ಲ್ಯಾರ್; ತ್ಯಾತುರ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಮರಾನ್. ತೆನಿ ಪವಿತ್ರ್ ಆತ್ಮ್ಯಾಚ್ಯಾ ಶೆತಾತ್ ಪೆರಲ್ಲೆ ರ್‍ಹಾಲ್ಯಾರ್, ಪವಿತ್ರ್ ಆತ್ಮ್ಯಾಕ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಕನ್ನಾಬಿ ಮರಾನ್ ನಸಲ್ಲೆ ಜಿವನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:8
31 ತಿಳಿವುಗಳ ಹೋಲಿಕೆ  

ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.


ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.


ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.


ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.


ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.


ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.


“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು.


ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.


ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.


ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು