ಚೆಫನ್ಯ 1:11 - ಕನ್ನಡ ಸಮಕಾಲಿಕ ಅನುವಾದ11 ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು. ಅಧ್ಯಾಯವನ್ನು ನೋಡಿ |