ಚೆಫನ್ಯ 1:12 - ಕನ್ನಡ ಸಮಕಾಲಿಕ ಅನುವಾದ12 ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿ |