Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:13
24 ತಿಳಿವುಗಳ ಹೋಲಿಕೆ  

ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.


ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.


ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.


ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ,


‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ”


ದ್ರಾಕ್ಷಿತೋಟವನ್ನು ನೆಟ್ಟು ಕಾಪಾಡುವಿರಿ, ಆದರೆ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಮತ್ತು ಹಣ್ಣು ಕೂಡಿಸುವುದಿಲ್ಲ, ಏಕೆಂದರೆ ಹುಳುಗಳು ಅದನ್ನು ತಿಂದುಬಿಡುವುವು;


ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.


ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು