Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:14
31 ತಿಳಿವುಗಳ ಹೋಲಿಕೆ  

“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ.


ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.


ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


“ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.


ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು.


ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’


ಕುರುಬರ ಕೂಗಿನ ಶಬ್ದವು, ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ.


ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ.


ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.


ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.


ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು