Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:9 - ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:9
11 ತಿಳಿವುಗಳ ಹೋಲಿಕೆ  

ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.


ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಅವಳ ಯಜಮಾನನು ಉದಯದಲ್ಲಿ ಎದ್ದು, ಮನೆಯ ಬಾಗಿಲನ್ನು ತೆರೆದು, ತನ್ನ ಮಾರ್ಗವಾಗಿ ಹೊರಡುವಾಗ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.


ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು