Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:11
36 ತಿಳಿವುಗಳ ಹೋಲಿಕೆ  

“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ.


ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ.


ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅನೇಕ ಜನರೂ, ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನೂ ಬರುವರು.


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.


“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.


ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು