Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:15 - ಕನ್ನಡ ಸಮಕಾಲಿಕ ಅನುವಾದ

15 “ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:15
27 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ?


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’ ”


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.


ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”


ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು.


ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಅವರು ಭಯಂಕರವಾದವರು ಮತ್ತು ಕ್ರೂರವಾದವರು. ಅವರು ತಮಗೆ ತಾವೇ ಕಾನೂನಾಗಿದ್ದಾರೆ. ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು