ಚೆಫನ್ಯ 2:3 - ಕನ್ನಡ ಸಮಕಾಲಿಕ ಅನುವಾದ3 ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು. ಅಧ್ಯಾಯವನ್ನು ನೋಡಿ |