Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:16 - ಕನ್ನಡ ಸಮಕಾಲಿಕ ಅನುವಾದ

16 ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು, “ಚೀಯೋನೇ, ನೀನು ಭಯಪಡಬೇಡ; ನಿನ್ನ ಕೈಗಳು ಬಲಹೀನವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದಿನದಲ್ಲಿ ಯೆರೂಸಲೇವಿುಗೆ - ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸಮಯದಲ್ಲಿ ಜೆರುಸಲೇಮಿಗೆ ಹೀಗೆ ಹೇಳಲಾಗುವುದು: “ಬಲವಾಗಿರು! ಭಯಪಡದಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:16
21 ತಿಳಿವುಗಳ ಹೋಲಿಕೆ  

ಆದ್ದರಿಂದ, ಜೋತು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ಬಲಪಡಿಸಿರಿ.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,


“ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು