Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:2 - ಕನ್ನಡ ಸಮಕಾಲಿಕ ಅನುವಾದ

2 ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:2
30 ತಿಳಿವುಗಳ ಹೋಲಿಕೆ  

ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.


ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.


ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


“ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು