Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:20 - ಕನ್ನಡ ಸಮಕಾಲಿಕ ಅನುವಾದ

20 ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:20
32 ತಿಳಿವುಗಳ ಹೋಲಿಕೆ  

ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


“ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.


ಅಂಥವರ ಮಾರ್ಗವು ಕತ್ತಲೆಯೂ ಜಾರುವಿಕೆಯೂ ಆಗಿರಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.


ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


“ ‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.


ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.


ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು