Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:8 - ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:8
39 ತಿಳಿವುಗಳ ಹೋಲಿಕೆ  

ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.


ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.


ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?


ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ, ನಿಮ್ಮ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿಮ್ಮ ಕೋಪವನ್ನು ಸುರಿಸಿಬಿಡಿರಿ.


ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು