ಜೆಕರ್ಯ 1:1 - ಕನ್ನಡ ಸಮಕಾಲಿಕ ಅನುವಾದ1 ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ: ಅಧ್ಯಾಯವನ್ನು ನೋಡಿ |