Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:12
24 ತಿಳಿವುಗಳ ಹೋಲಿಕೆ  

“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.


ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ.


ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.


ಯೆಹೋವ ದೇವರೇ, ನಾನು ಎಷ್ಟು ಕಾಲ ಸಹಾಯಕ್ಕಾಗಿ ಮೊರೆಯಿಡಬೇಕು. ನೀವು ನನ್ನ ಮೊರೆಗೆ ಎಷ್ಟು ಕಾಲ ಕಿವಿಗೊಡದಿರುವಿರಿ. “ಹಿಂಸೆಯಾಗುತ್ತಿದೆ,” ಎಂದು ಕೂಗುತ್ತಿದ್ದೇನೆ, ಆದರೂ ನೀವು ರಕ್ಷಿಸುವುದಿಲ್ಲ.


ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?


ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು