Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನಗೆ ವಿವರಿಸುವ ದೂತನಿಗೆ ಯೆಹೋವನು ಕರುಣೆಯ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:13
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು,


ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.


ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.


ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು