Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:14 - ಕನ್ನಡ ಸಮಕಾಲಿಕ ಅನುವಾದ

14 ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:14
19 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು, ತಮ್ಮ ಜನರನ್ನು ಕನಿಕರಿಸುವರು.


“ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”


ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.


ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,


ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.


ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು,


ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು