Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:16 - ಕನ್ನಡ ಸಮಕಾಲಿಕ ಅನುವಾದ

16 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:16
24 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು.


ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು.


ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? ಭೂಮಿಯ ಮೇಲೆ ನೂಲು ಹಿಡಿದವರು ಯಾರು?


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು. ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವುವು. ಗಲಿಬಿಲಿ ಎಂಬ ನೂಲನ್ನು, ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು