Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:17 - ಕನ್ನಡ ಸಮಕಾಲಿಕ ಅನುವಾದ

17 “ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತೊಮ್ಮೆ ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೀಯೋನನ್ನು ನಾನು ಸಂತೈಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:17
33 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು.


ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ, ನಾನು ನಿಮ್ಮನ್ನು ಆದರಿಸುವೆನು. ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ.”


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.


ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.


ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು.


“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು