Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:21 - ಕನ್ನಡ ಸಮಕಾಲಿಕ ಅನುವಾದ

21 ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನಾನು - ಇವರು ಏನು ಮಾಡುವದಕ್ಕೆ ಬಂದಿದ್ದಾರೆ ಎಂದು ಕೇಳಲು ಅವನು - ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವದಕ್ಕೆ ಬಂದಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:21
6 ತಿಳಿವುಗಳ ಹೋಲಿಕೆ  

ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ. ನಿಮ್ಮ ವೈರಿಗಳು ತಲೆ ಎತ್ತುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು