ಜೆಕರ್ಯ 1:4 - ಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.