ಜೆಕರ್ಯ 1:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.” ಅಧ್ಯಾಯವನ್ನು ನೋಡಿ |