Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:7 - ಕನ್ನಡ ಸಮಕಾಲಿಕ ಅನುವಾದ

7 ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಡೇರಿಯಸನ ಆಳ್ವಿಕೆಯ ಎರಡನೇ ವರ್ಷದ ಹನ್ನೊಂದನೆಯ ತಿಂಗಳಿನ (ಅಂದರೆ ಶೆಬಾತ್ ತಿಂಗಳಿನ) ಇಪ್ಪತ್ತನಾಲ್ಕನೆಯ ದಿನದಲ್ಲಿ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಸರ್ವೇಶ್ವರ ಕೊಟ್ಟ ದರ್ಶನವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪರ್ಶಿಯದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ (ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಆ ಸಂದೇಶವು ಹೀಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:7
4 ತಿಳಿವುಗಳ ಹೋಲಿಕೆ  

ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು