Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:3 - ಕನ್ನಡ ಸಮಕಾಲಿಕ ಅನುವಾದ

3 “ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ, ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ಆ ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಂಬರಿತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಂಬರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:3
28 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.


ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.


ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ನನ್ನ ಪ್ರಿಯಳೇ, ಫರೋಹನ ರಥಕ್ಕೆ ಕಟ್ಟಿದ ಕುದುರೆಗೆ ನಿನ್ನನ್ನು ಹೋಲಿಸಿದ್ದೇನೆ.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.


ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು