Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:7 - ಕನ್ನಡ ಸಮಕಾಲಿಕ ಅನುವಾದ

7 ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:7
31 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.


ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ.


ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು