Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:9 - ಕನ್ನಡ ಸಮಕಾಲಿಕ ಅನುವಾದ

9 ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:9
24 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.


ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.


ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.


ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”


ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.


ಎಷ್ಟಾದರೂ ಕಾಡು ಓಲಿವ್ ಮರದಿಂದ ನೀನು ಕಡಿದುಹಾಕಲಾದ ಕೊಂಬೆ. ನೀನು ನೆಟ್ಟು ಬೆಳೆಸಿರುವ ಉತ್ತಮ ಓಲಿವ್ ಮರಕ್ಕೆ ಅಸ್ವಾಭಾವಿಕವಾಗಿ ಕಸಿಮಾಡುವುದಾದರೆ ಸ್ವಾಭಾವಿಕವಾಗಿರುವ ಈ ಕೊಂಬೆಗಳನ್ನು ಎಷ್ಟೋ ಹೆಚ್ಚಾಗಿ ಓಲಿವ್ ಮರಕ್ಕೆ ಅದೇ ಕಸಿಕಟ್ಟುವುದು ಸುಲಭವಲ್ಲವೇ?


ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.


ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು