Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ನನಗೆ, “ಅದನ್ನು ಕುಂಬಾರನಿಗೆ ಎಸೆ. ಅವರು ನನಗೆ ಕಟ್ಟಿದ ಬೆಲೆ ಸರಿಯಾಗಿದೆ,” ಎಂದನು. ಆಗ ನಾನು, ಆ ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಯೆಹೋವ ದೇವರ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಎಸೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದನ್ನು ನೋಡಿದ ಸರ್ವೇಶ್ವರ ನನಗೆ: “ಇದನ್ನು ಕಾಣಿಕೆ ಕೋಶದಲ್ಲಿ ಬಿಸಾಡು. ಇದು ತಾನೋ ಅವರು ನನಗೆ ಕೊಡುವಂಥ ಘನವಾದ ಸಂಬಳ!” ಎಂದರು. ಅಂತೆಯೇ ನಾನು ಆ ಮೂವತ್ತು ಬೆಳ್ಳಿನಾಣ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯದ ಕಾಣಿಕೆ ಕೋಶದಲ್ಲಿ ಬಿಸಾಡಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ ಅದನ್ನು ಡಬ್ಬಿಗೆ ಹಾಕು ಎಂದು ಅಪ್ಪಣೆಮಾಡಿದಾಗ ನಾನು ಆ ಮೂವತ್ತು ತೊಲ ಬೆಳ್ಳಿಯನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:13
6 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.


ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು