Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:16 - ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:16
16 ತಿಳಿವುಗಳ ಹೋಲಿಕೆ  

ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.


ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.


ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.


“ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು