Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:2 - ಕನ್ನಡ ಸಮಕಾಲಿಕ ಅನುವಾದ

2 ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:2
12 ತಿಳಿವುಗಳ ಹೋಲಿಕೆ  

ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.


“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು