Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:11 - ಕನ್ನಡ ಸಮಕಾಲಿಕ ಅನುವಾದ

11 ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೆಗಿದ್ದೋವಿನ ತಗ್ಗಿನೊಳಗೆ ಹದದ್‍ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:11
7 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.


ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ;


ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು