ಜೆಕರ್ಯ 12:4 - ಕನ್ನಡ ಸಮಕಾಲಿಕ ಅನುವಾದ4 ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು. ಅಧ್ಯಾಯವನ್ನು ನೋಡಿ |
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.