Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:9 - ಕನ್ನಡ ಸಮಕಾಲಿಕ ಅನುವಾದ

9 ಆ ದಿವಸದಲ್ಲಿ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶಮಾಡುವುದಕ್ಕೆ ನಾನು ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ದಿನದಂದು ಜೆರುಸಲೇಮಿನ ಮೇಲೆ ಬೀಳುವ ರಾಷ್ಟ್ರಗಳೆಲ್ಲವನ್ನು ನಾನೇ ಧ್ವಂಸಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆರೂಸಲೇವಿುನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವ ಜನಾಂಗಗಳನ್ನು ನಾನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:9
6 ತಿಳಿವುಗಳ ಹೋಲಿಕೆ  

ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ಅಮಲೇರಿಸಿ ಓಲಾಡಿಸುವ ಪಾತ್ರೆಯಾಗಿ ಮಾಡುತ್ತೇನೆ. ಯೆರೂಸಲೇಮಿಗೂ, ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವಾಗ


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು