ಜೆಕರ್ಯ 13:2 - ಕನ್ನಡ ಸಮಕಾಲಿಕ ಅನುವಾದ2 “ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.